ಮಂಗಳೂರು: ಹವಾಮಾನ ಇಲಾಖೆಯು ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ , ಸರಕಾರಿ ಅನುದಾನಿತ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
