ಮುಂಬಯಿ ಪೋಲೀಸು ಆಯುಕ್ತರಾಗಿದ್ದವರಿಗೆ ಜೀವ ಬೆದರಿಕೆ ಇದೆ ಎನ್ನುವುದು ಆಶ್ಚರ್ಯಕರ ಸಂಗತಿ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಸ್ಲೆ ಪಾಟೀಲ್ ಹೇಳಿದರು.
ತನಗೆ ಜೀವ ಬೆದರಿಕೆ ಇರುವುದರಿಂದ ಅಡಗಿ ಕುಳಿತಿರುವುದಾಗಿ ಪರಂಬೀರ್ ಸಿಂಗ್ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ವೇಳೆ ಅವರ ಬಂಧನದ ಅಗತ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.