ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದರ ಬಗೆಗೆ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಶನರ್ ಕಚೇರಿಯು ತೀವ್ರ ಕಳವಳ ವ್ಯಕ್ತಪಡಿಸಿದೆ.

ಭಾರತವು ಗಡಿಯೆಡೆ ಹಿಂಸಾಚಾರವನ್ನು ಎದುರಿಸುತ್ತಿದೆ. ದೇಶದ ಕಾನೂನಿನಂತೆ ಶಾಂತಿ ಪಾಲನೆಗೆ ಕ್ರಮ ಕೈಗೊಳ್ಳುತ್ತಿದೆಯೇ ಹೊರತು ಮಾನವ ಹಕ್ಕುಗಳ ಉಲ್ಲಂಘನೆ ಪ್ರಶ್ನೆ ಇಲ್ಲಿಲ್ಲ ಎಂದು ಭಾರತ ಸರಕಾರದ ಪರ ಅರಿಂದಮ್ ಬಾನ್ವಿ ಹೇಳಿದರು.