ಎನ್‌ಎಸ್‌ಯು‌ಐನವರು ಬುಧವಾರ ಬೆಳಿಗ್ಗೆ ಬೆಂಗಳೂರಿನ ಇಸ್ರೋ ಸಂಸ್ಥೆಯೆದುರು ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಹೈಜಾಕ್ ಮಾಡುವುದರ ವಿರುದ್ಧ ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್  ಅಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೆದುರು ಪ್ರತಿಭಟನೆ ನಡೆಯಿತು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಭಾಗವಹಿಸಿ ಬಿಜೆಪಿಯ ಸಂಸದರು ಈಗಲಾದರೂ ರಾಜ್ಯದ ಪರ ಧ್ವನಿ ಎತ್ತಬೇಕು ಎಂದರು.