ಕಾರ್ಕಳ: ರಾಷ್ಟ್ರೀಯ ಹೆದ್ದಾರಿ_ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಕಳೆದ ಎರಡು ವರ್ಷಗಳ ಗ್ರಾಮಸ್ಥರ ಹೋರಾಟದ ನಂತರ ಹೆದ್ದಾರಿ ಇಲಾಖೆ ಗುಡ್ಡದ ಎತ್ತರದ ಅರ್ಧ ಭಾಗದವರೆಗೆ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಮಾಡಿತ್ತು.
ತಡೆಕೋಡೆಯ ಮೇಲ್ಭಾಗಕ್ಕೆ ಕೇವಲ ಮಣ್ಣು ತುಂಬಿಸಿ ಅಸಮರ್ಪಕ ಕಾಮಗಾರಿ ನಡೆಸಿತ್ತು.
ಗುಡ್ಡದ ಮಣ್ಣು ಕಲ್ಲುಗಳು ರಸ್ತೆಗೆ!?!
ಇದೀಗ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡದ ಮೇಲಿನ ದೊಡ್ಡ ದೊಡ್ಡ ಕಲ್ಲುಗಳು ಹಾಗೂ ಮಣ್ಣು ಸರ್ವಿಸ್ ರಸ್ತೆಗೆ ಬೀಳುತ್ತಿದ್ದು, ವಾಹನಗಳಿಗೆ ಮತ್ತು ಸರ್ವಿಸ್ ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರಿಗೆ ಆತಂಕಕಾರಿಯಾಗಿ ಪರಿಣಮಿಸಿದೆ.
ಮುಂಗಾರು ಪೂರ್ವದಲ್ಲಿ ಸುರಿಯುತ್ತಿರುವ ಒಂದೆರಡು ಮಳೆಗೆ ಈ ಪರಿಸ್ಥಿತಿಯಾದರೆ, ಮುಂದೆ ಜೂನ್ ನಿಂದ ಪ್ರಾರಂಭವಾಗುವ ಮುಂಗಾರು ಮಳೆ ನಿರಂತರವಾಗಿ ಸುರಿಯುವಾಗ ಖಂಡಿತವಾಗಿಯೂ ಗುಡ್ಡದ ಮಣ್ಣು ಜರಿದು ರಸ್ತೆಗೆ ಬಿದ್ದು ಇನ್ನಷ್ಟು ಅಪಾಯವಾಗುವ ಸಂಭವವಿದೆ.
ಮಾನ್ಯ ಜಿಲ್ಲಾಧಿಕಾರಿಯವರು ಶಾಸಕರು ಸಂಸದರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ನಿರ್ದೇಶನ ನೀಡಿ ಮಾಡಿಸಿದ ಈ ತಡೆಗೋಡೆ ನಿರ್ಮಾಣ ಕಾರ್ಯ ಗುಡ್ಡದ ಎತ್ತರ ಮತ್ತು ಉದ್ದಕ್ಕೆಅರ್ಧ ಭಾಗಕಷ್ಟೇ ಮಾಡಿದ್ದು, ಉಳಿದರ್ದ ಭಾಗದ ಮಣ್ಣು ನಿರಂತರ ಜರಿದು ಬೀಳುವುದು ಖಂಡಿತ.
ತಡೆಗೋಡೆ ವಿಸ್ತರಣೆ ಆಗಿಲ್ಲ!?!?
ಸಾಣೂರು ಯುವಕಮಂಡಲದ ಆಟದ ಮೈದಾನದ ಅಂಚಿಗೆ ತಡೆಗೋಡೆಯನ್ನು ವಿಸ್ತರಣೆ ಮಾಡುವಂತೆ ಮಾನ್ಯ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿಯವರ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆಯನ್ನು ಕೂಡ ಕಳುಹಿಸಲಾಗಿದೆ.
ಆದರೂ ಈವರೆಗೆ ತಡೆಗೂಡೆ ವಿಸ್ತರಣಾ ಕಾರ್ಯಕ್ಕೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಜನಸಾಮಾನ್ಯರಿಗೆ ಅರ್ಥವಾಗುವ ವಿಚಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹೊಳೆಯದೆ ಇರುವುದು ವಿಪರ್ಯಾಸ.
ಜನಾಕ್ರೋಶವನ್ನು ಎದುರಿಸಲು ಸಿದ್ಧರಾಗಿ!
ಕೇವಲ ಜನರ ಒತ್ತಡಕ್ಕೆ ಮಣಿದು ಅರೆಬರೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪರಿಸರದ ಜನತೆ ಹಿಡಿ ಶಾಪ ಹಾಕುತ್ತಿದ್ದು, ಕೂಡಲೇ ಗುಡ್ಡದ ಮಣ್ಣು ರಸ್ತೆಗೆ ಬೀಳದಂತೆ ಸುರಕ್ಷಿತವಾಗಿ ತಡೆಗೋಡೆ ಕಾಮಗಾರಿಯನ್ನು ಸಂಪೂರ್ಣಗೊಳಿಸದಿದ್ದರೆ ಮತ್ತೊಮ್ಮೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಾಣೂರು ಗ್ರಾಮಸ್ಥರ ಭಾರಿ ಜನಾಕ್ರೋಶಕ್ಕೆ ತುತ್ತಾಗಬೇಕಾಗಿದೀತೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಎಚ್ಚರಿಸಿರುತ್ತಾರೆ.