ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಕ್ರಮ ಉದ್ಘಾಟನೆ ಭಜನೆ ಎಂಬುದು ಮನುಷ್ಯನ ಜೀವನದಲ್ಲಿ ದೇವರನ್ನು ಅತೀ ವೇಗವಾಗಿ ಒಲಿಸುವಂತಹ ಒಂದು ಅದ್ಬುತವಾದ ಶಕ್ತಿ. ಎಲ್ಲಿ ಭಜಕರು ಇರುವರೋ ಅಲ್ಲಿ ದೇವನಿರುವುದು ಖಂಡಿತ. ದೇವರಿಗೆ ಮತ್ತು ಮನುಷ್ಯರಿಗೆ ಹತ್ತಿರದ ಸಂಬಂಧ ಅಂದ್ರೆ ಭಜನೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಸಹಯೋಗದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಆದಿತ್ಯವಾರ ಹಮ್ಮಿಕೊಂಡಿದ್ದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಮಾವಿನಕಟ್ಟೆ ಶ್ರೀ ಮಹಾಮ್ಮಾಯಿ ಭಜನಾ ಮಂಡಳಿಯ ಸದಸ್ಯ ರಾಜೇಂದ್ರ ಶೆಟ್ಟಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಕಾರ್ಯದರ್ಶಿ ಸುರೇಶ್ ಪೂಜಾರಿ ಕಾಸ್ರಬೈಲು, ಅಂತರಿಕ ಲೆಕ್ಕಪರಿಶೋಧಕ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್,  ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಲಲಿತಾ ಆಚಾರ್ಯ, ಆರತಿ ಕುಮಾರಿ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪೂಜಾರಿ, ಕೀರ್ತನ್ ಪೂಜಾರಿ, ಸುದರ್ಶನ್ ಸಾಲ್ಯಾನ್, ಆಶಾ ಆಚಾರ್ಯ ಹಾಗೂ ಭಜನಾ ಮಂಡಳಿಯ ಸದಸ್ಯರು ಮೊದಲಾದವರಿದ್ದರು.