ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 20 ರಂದು ಗುರುವಾರ 10 ಗಂಟೆಗೆ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬಿಜೇಶ್ ಚೌಟ ಉದ್ಘಾಟಿಸಲಿದ್ದು, ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ್ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ವಹಿಸಿಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎನ್. ಅವರು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
