ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವೇದಿಕೆಯ ಆಶ್ರಯದಲ್ಲಿ ವಿಜ್ಞಾನ ವೇದಿಕೆಯ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪುತ್ತೂರಿನ ಖ್ಯಾತ ದಂತ ವೈದ್ಯರಾದ ಡಾ| ಎಲ್ ಕೃಷ್ಣಪ್ರಸಾದ್ ಉದ್ಘಾಟಕರಾಗಿ ಭಾಗವಹಿಸಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೊರವರು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕ್ಯಾಂಪಸ್ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉದ್ಘಾಟನ ಕಾರ್ಯಕ್ರಮದ ಬಳಿಕ  ಎಲ್ ಕೃಷ್ಣ ಪ್ರಸಾದ್ ರವರುʼ ದಂತ ವೈದ್ಯಕೀಯ ಮತ್ತು ರಸಾಯನ ಶಾಸ್ತ್ರʼಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ತಮ್ಮಉಪನ್ಯಾಸದಲ್ಲಿ ಅವರು ದಂತ ಸ್ವಾಸ್ಥ್ಯ ಕೆಡುವ ಬಗೆ ಹೇಗೆ ಮತ್ತು ಹುಳುಕು ಹಲ್ಲುಗಳ ಚಿಕಿತ್ಸೆ ಮಾಡುವ ವಿವಿಧ ವಿಧಾನಗಳನ್ನು ತಿಳಿಸಿದರು. 

ತನ್ವಿ ಮತ್ತು ಬಳಗ ಪ್ರಾರ್ಥಿಸಿದರು. ವಿಜ್ಞಾನ ವೇದಿಕೆಯ ಅಧ್ಯಕ್ಷರಾದ ರಕ್ಷಾ ಅಂಚನ್ ಸ್ವಾಗತಿಸಿದರು. ವಿಜ್ಞಾನ ವೇದಿಕೆಯ ನಿರ್ದೇಶಕರಾದ ಡಾ| ಪಿ.ಎಸ್. ಕೃಷ್ಣ ಕುಮಾರ್ ಉದ್ಘಾಟಕರನ್ನು ಸಭೆಗೆ ಪರಿಚಯಿಸಿದರು. ಉಪಾಧ್ಯಕ್ಷರಾದ ಪ್ರಕೃತಿ ಅಶೋಕ್ ವಂದಿಸಿದರು. ತೃತೀಯ ಬಿಎಸ್ಸಿಯ ವಿದ್ಯಾರ್ಥಿನಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು. 

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಹಾಗೂ ಕಾಲೇಜಿನ ಉಪ-ಪ್ರಾಂಶುಪಾಲರಾದ ಪ್ರೊ| ಗಣೇಶ್ ಭಟ್ ಹಾಗೂ ವಿಜ್ಞಾನ ವೇದಿಕೆಯ ವಿದ್ಯಾರ್ಥಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.