ಮೂಡುಬಿದಿರೆ: ಸ್ಥಳೀಯ ತಾಲೂಕು ಆಡಳಿತ ಸೌಧದ ಆವರಣದಲ್ಲಿರುವ ಪಡಸಾಲೆಯಲ್ಲಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿ ಸೆಪ್ಟೆಂಬರ್ 4ರಂದು ಉದ್ಘಾಟಿಸಲ್ಪಟ್ಟಿತು. ಜಿಲ್ಲಾ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂದೋಡಿ ಕಚೇರಿಯನ್ನು ದೀಪ ಬೆಳಗಿಸಿದರು. ಅವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಆಶ್ವಾಸನೆಯಂತೆ ಆರು ತಿಂಗಳ ಒಳಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅರ್ಹ ಎಲ್ಲರಿಗೂ ಸೌಲಭ್ಯವನ್ನು ಒದಗಿಸಿದೆ ಎಂದರು.
ಮುಖ್ಯ ಅತಿಥಿ ಮಾಜಿ ಮಂತ್ರಿ ಅಭಯ ಚಂದ್ರ ಜೈ ಮಾತನಾಡಿ ಜನರಿಗೆ ಕೊಟ್ಟ ಮಾತನ್ನು ಕಾಂಗ್ರೆಸ್ ಸರಕಾರ ಉಳಿಸಿಕೊಂಡಿದೆ. ಪಕ್ಷ, ಜಾತಿ ತಾರತಮ್ಯ ಇಲ್ಲದೆ ಸಮಾನ ಅವಕಾಶವನ್ನು ಎಲ್ಲರಿಗೂ ನೀಡಿದೆ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ, ಮಿಥುನ್ ರೈ, ಮೂಡ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ, ಪುರಸಭಾ ಸದಸ್ಯ ಕೊರಗಪ್ಪ, ಸುರೇಶ್ ಕೋಟ್ಯಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ವಲೇರಿಯನ್ ಸಿಕ್ವೇರಾ, ಮಮತಾ ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯ ಶೆಟ್ಟಿ, ಬೆಳವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಕೆ ಪೂಜಾರಿ ಹಾಗೂ ಇತರರು ಹಾಜರಿದ್ದರು.
ಮೂಡಬಿದ್ರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.