ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಾಳೆ 3000 ಚದರ ಅಡಿಯ ಮೇಜರ್‍ಧ್ಯಾನ್‍ಚಂದ್ ಒಳಾಂಗಣ ಕ್ರೀಡಾ ಸಂಕೀರ್ಣವನ್ನು ದಕ್ಷಿಣಕನ್ನಡ ಸಂಸತ್ ಸದಸ್ಯರಾದ ಕ್ಯಾ. ಬ್ರಿಜೇಶ್‍ಚೌಟರವರು ಉದ್ಘಾಟನೆ ಮಾಡಲಿದ್ದಾರೆ. ಈ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್‍ ಕೋರ್ಟ್, ಟೇಬಲ್ ಟೆನ್ನಿಸ್, ಕ್ಯಾರಂ, ಚೆಸ್ ಮುಂತಾದ ಒಳಾಂಗಣ ಕ್ರೀಡೆಗಳನ್ನಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಳ್ಳಲಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್‍ನ ಆಡಳಿತಾಧಿಕಾರಿಯಾದ ಡಾ. ಕೆ.ಸಿ ನಾೈಕ್‍ರವರು ವಹಿಸಲಿದ್ದಾರೆ. ಪ್ರಧಾನ ಸಲಹೆಗಾರರಾದ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಬೋಧಕ - ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುತ್ತಾರೆ.