ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಏಪ್ರಿಲ್ 12 ರಂದು ಉದ್ಘಾಟನೆ ನೆರವೇರಿಸಿದರು. ಮುಖ್ಯವಾಗಿ, 4 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೋಲೋಡಿ ದ್ವಾರದ ಮುಖ್ಯ ರಸ್ತೆಯಿಂದ ಅರಸುಲಪದವು ತನಕದ ರಸ್ತೆ ಅಭಿವೃದ್ಧಿ.
2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಾರಂದಾಯ ದೈವಸ್ಥಾನದ ರಸ್ತೆ ಹಾಗೂ ತಡೆಗೋಡೆ ಅಭಿವೃದ್ಧಿ ಕಾಮಗಾರಿ. 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಪಾರ್ಕಿಂಗ್ ವ್ಯವಸ್ಥೆಗೆ ಆವರಣಗೋಡೆ ಅಭಿವೃದ್ಧಿ ಕಾಮಗಾರಿ. 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೀರುಡೆ ಮುಖ್ಯ ರಸ್ತೆಯಿಂದ ಮಾರ್ಲೊಟ್ಟು ತನಕದ ರಸ್ತೆ ಅಭಿವೃದ್ಧಿ ಕಾಮಗಾರಿ. ಇತ್ಯಾದಿಗಳು.