ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೆರೆ ಬಳಿ ಶಾಲೆಯ ವಿದ್ಯಾರ್ಥಿಗಳಿಗೆ ನವೆಂಬರ್ 8ರಂದು ಗ್ರಾಮೀಣ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. 

ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡಬಿದಿರೆ ಅವರು ಮಾತನಾಡಿ ಗ್ರಾಮೀಣ ಪರಿಸರದಲ್ಲಿ ಕಲಿಯುವುದರಿಂದ ಉನ್ನತ ವ್ಯಾಸಂಗಕ್ಕೆ ಸರಕಾರ ಪೂರಕ ಅಂಗಗಳನ್ನು ನೀಡುತ್ತದೆ. ಅಲ್ಲದೆ ಉದ್ಯೋಗ ಪಡೆಯುವ ಸಂದರ್ಭದಲ್ಲಿ ಕೂಡ ಹೆಚ್ಚಿನ ಕೃಪಾಕ ನೀಡಿ ಉತ್ತಮ ಅವಕಾಶಗಳನ್ನು ಒದಗಿಸುತ್ತಿದೆ. 

ಹೀಗಾಗಿ ಪಿಯುಸಿ ತನಕದ ವಿದ್ಯಾಭ್ಯಾಸಕ್ಕೆ ಯಾವತ್ತೂ ಗ್ರಾಮೀಣ ಪರಿಸರದ ಶಾಲೆಗಳಲ್ಲಿಯೇ ಕಲಿಯುವುದರಿಂದ ವಿದ್ಯಾರ್ಥಿಗಳು ಸರಕಾರ ನೀಡುತ್ತಿರುವ ಎಲ್ಲ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಗ್ರಾಮೀಣ ಕೃಪಾಂತವನ್ನು ಕೂಡ ಪಡೆಯಲು ಸಾಧ್ಯವಿರುತ್ತದೆ ಎಂದು ಹಲವಾರು ಉದಾಹರಣೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಬಂಧುಗಳು ಹಾಜರಿದ್ದರು.