ಫೋಟೊ ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಸಮೀಪದ ಬೆಳುವಾಯಿ ಸರಕಾರಿ ಉರ್ದು ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ 22 ರಂದು ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ವಿಶೇಷ ಸೌಲಭ್ಯಗಳ ಮಾಹಿತಿಯನ್ನು ನೀಡಲಾಯಿತು.
ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆಯವರು ಮಾಹಿತಿಯನ್ನು ನೀಡಿದರು. ಒಂದನೇ ತರಗತಿಯಿಂದ ಹತ್ತನೇ ತರಗತಿಯ ತನಕ ಗ್ರಾಮೀಣ ಪ್ರದೇಶದಲ್ಲಿಯೇ ಕಲಿತಲ್ಲಿ ಗ್ರಾಮೀಣ ಕೃಪಾಂಕ, ಅದೇ ರೀತಿ ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದರಿಂದ ಹೆಚ್ಚುವರಿ 15 ಅಂಕಗಳ ಕೃಪಾಂಕ ಸರ್ಕಾರದಿಂದ ನೀಡಲಾಗುತ್ತಿದೆ. ಶಿಕ್ಷಣಕ್ಕಾಗಿ ಎಲ್ಲವೂ ಉಚಿತ ದೊರಕುತ್ತಿದೆ ಅವೆಲ್ಲವನ್ನು ಉಪಯೋಗಿಸಿಕೊಂಡು ಬೆಳೆದು ಉತ್ತಮ ಕಲಿಕೆಯೊಂದಿಗೆ ಉತ್ತಮ ಉದ್ಯೋಗ ಪಡೆಯಲು ಸಾಧ್ಯವಿದೆ ಎಂದರು.
ಶಿಕ್ಷಕ ಭರತ ಕುಮಾರ್ ಸ್ವಾಗತಿಸಿದರು. ಮಾಲತೇಶ ಕಾರ್ಯಕ್ರಮ ಸಂಘಟಿಸಿದ್ದರು. ಮುಖ್ಯ ಶಿಕ್ಷಕಿ ರೂಪಾ ಗುಂಜಳ್ಳಿ ವಂದಿಸಿದರು.