ರಾಜ್ಯದ ಎಲ್ಲ ಕಡೆ ಆಳುವ ಪಕ್ಷದ ಜನತಾ ದರ್ಶನ ಕಾರ್ಯಕ್ರಮಗಳು ನಡೆದವು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ನಡೆಸಿದರು.

ದಕ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ಅವರು ಇದೊಂದು ಕ್ರಾಂತಿಕಾರಿ ಹೆಜ್ಜೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು ಎಂದರು. ಜನತಾ ದರ್ಶನ ಕಾಟಾಚಾರದ್ದು ಆಗಲು ಬಿಡುವುದಿಲ್ಲ. ಜನರ ಕಷ್ಟಕ್ಕೆ ಎಲ್ಲ ರೀತಿಯಲ್ಲೂ ಸ್ಪಂದಿಸಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು