ಮಂಗಳೂರು: ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ, ಎನ್.ಎಸ್.ಯು.ಐ ಸಂಘಟನಾ ಉಸ್ತುವಾರಿ ಆರ್.ಧ್ರುವನಾರಾಯಣ ಅವರು  ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಈ ವೇಳೆ ಧ್ರುವನಾರಾಯಣ ಅವರು ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ಸಹಾಯ ಧನ ಮಾಡಿದರು.

ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ,  ದ.ಕ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ, ಹಸನ್ ಜೊತೆಗಿದ್ದರು.