ಕಾರ್ಕಳ, ಡಿ 12: ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ಶ್ರೀ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.


ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಞ ವೈದ್ಯೆ ಡಾ. ಹನಾ ಶೆಟ್ಟಿ ಉದ್ಘಾಟಿಸಿ, ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಒತ್ತಡಗಳ ಜೀವನ ಶೈಲಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ, ಇಂತ ಆರೋಗ್ಯ ಶಿಬಿರಗಳು ಈ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.
ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ, ಮಾತನಾಡಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಬಡ ಜನತೆ, ಮಹಿಳೆಯರ ಪರವಾದ ಅವರ ಕಾಳಜಿಯನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ. ಅವರ ಹೆಸರಿನಲ್ಲಿ ನಡೆಯುತ್ತಿರುವ ಇಂದಿನ ಆರೋಗ್ಯ ಶಿಬಿರವು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಭಾಸ್ಕರ ಪೂಜಾರಿ ಸಂದರ್ಭೋಚಿತವಾಗಿ ಮಾತನಾಡಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಶಿಬಿರದಲ್ಲಿ 200ಕ್ಕೂ ಹೆಚ್ವು ಸಾರ್ವಜನಿಕರು ವಿವಿಧ ಆರೋಗ್ಯ ತಪಾಸಣೆಯನ್ನು ನಡೆಸಿ ಶಿಭಿರದ ಸದುಪಯೋಗವನ್ನು ಪಡೆದುಕೊಂಡರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಂಬಂದಿ ಸಹಾಯ ಧನವನ್ನು ಉದಯ ಶೆಟ್ಟಿ ಮುನಿಯಾಲು ಅವರು ವಿತರಿಸಿದರು. ಗ್ರಾಮೀಣ ಸಮಿತಿಯ ಮಹಿಳಾ ಅದ್ಯಕ್ಷರುಗಳನ್ನು ವೇದಿಕೆ ಆಹ್ವಾನಿಸಿ ಹೂವನ್ನಿತ್ತು ಅಭಿನಂದಿಸಲಾಯಿತು.
ಈ ಸಂದರ್ಶನದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅದ್ಯಕ್ಷ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ. ಶವೀಝ್ ಪೈಜಿ, ಪ್ರಸಾದ್ ನೇತ್ರಾಲಯದ ಡಾ. ಕ್ರೀನಾ, ಮಾಲಿನಿ ರೈ, ಎಸ್.ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುರಸಭಾ ಸದಸ್ಯೆ ನಳಿನಿ ಆಚಾರ್ಯ ನಿರೂಪಿಸಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ ಧನ್ಯವಾದವಿತ್ತರು.