ಕಾರ್ಕಳ: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ರವರು  ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸಮಾಜದಲ್ಲಿ ಸವಾಲನ್ನು ಎದುರಿಸಬಲ್ಲವರು ಸರಕಾರಿ ಶಾಲೆಯಲ್ಲಿ  ಕಲಿತ ವಿದ್ಯಾರ್ಥಿಗಳು. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದರು.

ಮುಖ್ಯ ಅತಿಥಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನೆಲ್ಲಿ ,ಇಲ್ಲಿಯ ಮೊಕ್ತೇಸರರಾದ ಸುನಿಲ್ ಕೆ ಆರ್. ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದರು. 

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಸಂದೀಪ್ ಕುಡ್ವ, ನ್ಯಾಯವಾದಿಗಳಾದ ನಂದಿನಿ ಶೆಟ್ಟಿ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಎ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಗೈಡ್ಸ್ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಸಂತ್ ಎಂ ನಿವೃತ್ತ ಮುಖ್ಯ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.  ಜಗದೀಶ್ ಉಪನ್ಯಾಸಕರು ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಸುಚೇತಾ ಕಾಮತ್ ವಂದಿಸಿದರು.