ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಬೆಟ್ಟು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ ನರೇಂದ್ರ ಕಾಮತ್ ಅವರು ಉಡುಪಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾ ಸ್ಪರ್ಧೆಯಲ್ಲಿ ಯೋಗಾಸನ ವಿಭಾಗದಲ್ಲಿ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಗಳಲ್ಲಿ ಐದು ಚಿನ್ನದ ಪದಕವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮಾರ್ಚ್ 14ರಂದು ಉಡುಪಿಯ ಅಜ್ಜರ ಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿವಿಧ ಯೋಗಾಸನ ಸ್ಪರ್ಧೆಗಳಲ್ಲಿ ಅಪೂರ್ವ ಪ್ರದರ್ಶನವನ್ನು ನೀಡಿದ ನರೇಂದ್ರ ಕಾಮತ್ ಹಾಗೂ ಬಳಗ, ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.