ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ ಎಸ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಎಲ್ಲಾ ಭಾಷೆಗಳಿಗೆ ತಮ್ಮದೇ ಆದ ಮಹತ್ವವಿದೆ.
ಭಾಷೆಗಳಲ್ಲಿ ಪರಿಪೂರ್ಣತೆಯಿದ್ದರೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಿಂದಿ ಭಾಷೆಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು” ಎಂದು ಹೇಳಿ ಹಿಂದಿ ಭಾಷೆಯ ವ್ಯಾಕರಣ ವಿಶೇಷತೆಯ ಬಗ್ಗೆ ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಅವರು ಮಾತನಾಡಿ “ಯಾವುದೇ ಭಾಷೆಯನ್ನು ಕಲಿತಾಗ ಜೀವನದಲ್ಲಿ ಅನಿವಾರ್ಯ ಸಂದರ್ಭದಲ್ಲಿ ನಮ್ಮ ಸಹಾಯಕ್ಕೆ ಬರುತ್ತದೆ” ಎಂದು ಹೇಳಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಹಿಂದಿ ಉಪನ್ಯಾಸಕಿ ಶಾಹಿನಾ ಬಾನು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ಶಮೀನಾ ಅಮೀರ್ ಪ್ರಸ್ತಾವನೆಗೈದರೆ ವಿದ್ಯಾರ್ಥಿ ಬ್ರೋವಿನ್ ಅಗೇರಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸುದೀಕ್ಷಾ ಸ್ವಾಗತಿಸಿ ಸ್ಲೀಟಾ ಪ್ರೀಮಲ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ಶನ್ವಿತಾ ವಂದಿಸಿದರು.