ಕಾರ್ಕಳ: ರ‍್ಯಾಗಿಂಗ್ ಎಂಬುದು ಕ್ರಿಮಿನಲ್ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹದಿಂದ ಬಾಳ್ವೆೆ ನಡೆಸಿ ಸಜ್ಜನರಾಗಿ ಸಾಧನೆ ಮಾಡಬೇಕು ಎಂದು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕಿವಿಮಾತು ಹೇಳಿದರು. ನಿಟ್ಟೆೆ ಎನ್‌ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ವತಿಯಿಂದ ಮಂಗಳವಾರ ಕಾಲೇಜಿನ ಶಾಂಭವಿ ಸೆಮಿನಾರ್ ಸಭಾಂಗಣದಲ್ಲಿ ಜರಗಿದ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರ‍್ಯಾಗಿಂಗ್ ಎಂಬುದು ನಮ್ಮ ಸಂಸ್ಕೃತಿ ಮತ್ತು ಸಭ್ಯತೆಗೆ ವಿರುದ್ಧವಾಗಿದೆ. ರಾಷ್ಟ್ರದ ಭವಿಷ್ಯ ಇಂದಿನ ವಿದ್ಯಾರ್ಥಿಗಳಲ್ಲಿದೆ. ಎಲ್ಲ ವಿದ್ಯಾರ್ಥಿಗಳು ಓದು ಮತ್ತು ಸಾಧನೆಯ ಕಡೆಗೆ ಗಮನ ಕೊಡಬೇಕು. ಯಾರಾದರೂ ರ‍್ಯಾಗಿಂಗ್ ಗೆ ಪ್ರೇರಣೆ, ರ‍್ಯಾಗಿಂಗ್ ಮೂಲಕ ಕಿರುಕುಳ ನೀಡಿದಲ್ಲಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸಮಿತಿ ಗಮನಕ್ಕೆೆ ತರಬೇಕು. ಕಾಲೇಜು ಅಧ್ಯಾಪಕರು, ಪೊಲೀಸರು ಇರುವ ಈ ಸಮಿತಿ ವಿದ್ಯಾರ್ಥಿಗಳ ಸುರಕ್ಷತೆಗೆ ಮುತುವರ್ಜಿವಹಿಸಲಿದೆ ಎಂದ ಅವರು ಮಾದಕ ದ್ರವ್ಯ ವ್ಯಸನಗಳಿಂದ ಆಗುವ ಸಮಸ್ಯೆೆ ಮತ್ತು ಕಾನೂನು ತೊಡಕಿನಲ್ಲಿ ಸಿಲುಕಿಕೊಂಡರೆ ಮುಂದೆ ಆಗಬಹುದಾದ ಅಪಾಯಗಳ ಬಗ್ಗೆೆ ಎಚ್ಚರಿಕೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಆಫ್ ಕ್ಯಾಂಪಸ್ ನ ಅಭಿವೃದ್ದಿ ಹಾಗೂ ನಿರ್ವಹಣಾ ವಿಭಾಗದ ನಿರ್ದೇಶಕ ಎ ಯೊಗೀಶ್ ಹೆಗ್ಡೆೆ ಮಾತನಾಡಿ, ನಿಟ್ಟೆೆ ವಿದ್ಯಾಸಂಸ್ಥೆೆಯಲ್ಲಿ ಉತ್ತಮ ಶಿಕ್ಷಣಕ್ಕೆೆ ಪೂರಕ ವ್ಯವಸ್ಥೆೆಗಳನ್ನು ಹೊಂದಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಾಳಜಿಗೆ ಕಾನೂನಾತ್ಮಕವಾಗಿ ಇರುವ ಎಲ್ಲ ಸಮಿತಿ ಮತ್ತು ನಿಯಮಾವಳಿಗಳನ್ನು ವ್ಯವಸ್ಥಿತವಾಗಿ ಪಾಲಿಸಲಾಗುತ್ತದೆ, ವಿದ್ಯಾರ್ಥಿಗಳು ಈ ಬಗ್ಗೆೆ ಹೆಚ್ಚಿನ ಅರಿವು ಹೊಂದಿರಬೇಕು ಎಂದು ನುಡಿದರು.
ವೇದಿಕೆಯಲ್ಲಿ ಕಾರ್ಕಳ ಪೋಲೀಸ್ ನ ಕ್ರೈಮ್ ವಿಭಾಗದ ಠಾಣಾಧಿಕಾರಿ ಸುಂದರ್, ನಿಟ್ಟೆ ಆಫ್ ಕ್ಯಾಂಪಸ್ ನ ಪರಿಕ್ಷಾ ನಿಯಂತ್ರಕ ಡಾ| ಸುಬ್ರಹ್ಮಣ್ಯ ಭಟ್, ಉಪಕುಲಸಚಿವೆ ಡಾ| ರೇಖಾ ಭಂಡಾರ್ಕರ್ ಉಪಸ್ಥಿತರಿದ್ದರು.
ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ| ನಾಗೇಶ್ ಪ್ರಭು ಸ್ವಾಗತಿಸಿದರು. ಮಾನವಿಕ ವಿಭಾಗದ ಮುಖ್ಯಸ್ಥ ಹಾಗೂ ಹುಡುಗರ ಹಾಸ್ಟೆಲ್ ನ ಚೀಫ್ ವಾರ್ಡನ್ ಡಾ| ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.