ಕಾರ್ಕಳ: ಸ್ಥಳೀಯ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಪಾಠದ ರೀತ್ಯಾ ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣದ ವಿಶೇಷ ಮಾಹಿತಿ ಕಾರ್ಯಕ್ರಮ ನವೆಂಬರ್ 4 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಸೂರ್ಯ ಫೌಂಡೇಶನ್ ನ ದ.ಕ.ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ, ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಿಕಾ ವರದಿಗಾರ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಆಗಮಿಸಿದ್ದರು.
ಅವರು ತಮ್ಮ ಭಾಷಣದಲ್ಲಿ ಗ್ರಾಹಕನೇ ರಾಜ ನಾಗಲು ಇರುವ ಹಕ್ಕು, ಕರ್ತವ್ಯ, ಜವಾಬ್ದಾರಿಗಳನ್ನು ಮನವರಿಕೆ ಮಾಡಿಕೊಟ್ಟರು. ದೈನಂದಿನ ಬದುಕಿನಲ್ಲಿ ಯಾವುದೇ ಲೋಪದೋಷಗಳನ್ನು, ಕೊರತೆಗಳನ್ನು ಕಂಡಾಗ ಗ್ರಾಹಕ ರಕ್ಷಣಾ ಕಾಯ್ದೆಯ ಸದುಪಯೋಗವನ್ನು, ಪಡೆಯಬಹುದಾದ ಕ್ರಮವನ್ನು ತಿಳಿಸಿಕೊಟ್ಟರು. ಅಲ್ಲದೆ ಕಾನೂನಾತ್ಮಕವಾಗಿ ರಕ್ಷಣೆ, ಪರಿಹಾರ, ಮಾಹಿತಿ ಹಕ್ಕಿನ ಉಪಯೋಗ ಇತ್ಯಾದಿಗಳ ಬಗ್ಗೆ ಉದಾಹರಣೆಯೊಂದಿಗೆ ತಿಳಿವಳಿಕೆ ಮೂಡಿಸಿದರು. ಶಾಲಾ ಉಪಪ್ರಾಂಶುಪಾಲ ಯೋಗೀಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದು ವಂದಿಸಿದರು.