ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿಸಹಯೋಗದಲ್ಲಿ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವÀ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.