ಭಾನುವಾರ ಸಂಜೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಕೋವಿಡ್ ಕಾರಣ ಮೃತರಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಸಂಬಂಧಿಕರು ಆಸ್ಪತ್ರೆ ಮುಂದೆ ಗಲಾಟೆ ಮಾಡಿದರು.
ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಶಾಸಕ ವೇದವ್ಯಾಸ ಕಾಮತ್ ಬಂದು ಮೃತರ ಬಂಧುಗಳಿಗೆ ಸಾಂತ್ವನ ಹೇಳಿದರು.