ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ಬೆಳುವಾಯಿ ಕ್ಲಸ್ಟರ್ ಮಟ್ಟದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಕಲಿಕಾ ಹಬ್ಬವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಅಕ್ಷತಾ ಆದರ್ಶ್ ನೆರವೇರಿಸಿ ಮಕ್ಕಳಲ್ಲಿ ಕಲಿಕೆಯೊಂದಿಗೆ ಪರಾಮರ್ಶಿಸುವ ಗುಣವು ಇರಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಎಸ್ಡಿಎಂಸಿ ಅಧ್ಯಕ್ಷ ಲಲಿತಾ ಗ್ರಾಮ ಪಂಚಾಯತ್ ಸದಸ್ಯರಾದ ಟೆಸ್ಲಿನ ಮತ್ತು ನಿತಿನ್ ವಹಿಸಿದ್ದರು ಶಿಕ್ಷಣ ಸಂಯೋಜಕಿ ಸ್ಮಿತಾ ಮಿರಂದ ಸಮನ್ವಯಾಧಿಕಾರಿ ಸೌಮ್ಯ ಸಿ ಆರ್ ಪಿ ದಿನಕರ್ ಮತ್ತು ನ್‌ಪಿಎಸ್ ನೌಕರರ ರಾಜ್ಯ ಸಹ ಕಾರ್ಯದರ್ಶಿ ಮೋಹನ್ ಕೊಳವಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಪ್ರಸನ್ನ ವಿ ಶೆಣೈ ಕಾರ್ಯಕ್ರಮವನ್ನು ನಿರೂಪಿಸಿದರು. 11 ಶಾಲೆಗಳ 105 ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ಸೇರಿ ಒಟ್ಟು 200 ಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕೆಎಂಎಫ್ ಸಹಕಾರದಿಂದ ಎಲ್ಲರಿಗೂ ಮಜ್ಜಿಗೆ ವಿತರಿಸಲಾಯಿತು.