ಕಾರ್ಕಳ: ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅವುಗಳ ಅಗತ್ಯತೆಯ ಕುರಿತು ಉಪನ್ಯಾಸ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ವಿಭಾಗದ ಅಭಿವೃದ್ಧಿ ಅಧಿಕಾರಿ ಅಶ್ವಿತ್ ನಾಯ್ಕ್ ಅವರು ಸಂಪನ್ಮೂಲ ಅಧಿಕಾರಿಗಳಾಗಿದ್ದರು. ಅವರು ಮಾತನಾಡಿ “ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯವಾಗಿದ್ದು, ವಿಮೆ ಮಾಡಿಸುವ ಮೊದಲು ಅದರ ನಿಯಮ ನಿಬಂಧನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ವಿಮಾಕ್ಷೇತ್ರದಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಮುಂತಾದ ಅನೇಕ ಉದ್ಯೋಗಾವಕಾಶಗಳಿದ್ದು ವಿದ್ಯಾರ್ಥಿಗಳು ಉದ್ಯೋಗಕ್ಷೇತ್ರ ಪ್ರವೇಶಿಸುವಾಗ ಇವುಗಳನ್ನು ಬಳಸಿಕೊಳ್ಳಬೆಕು” ಎಂದು ಹೇಳಿ ವಿಮಾ ಕ್ಷೇತ್ರದ ಸಂಪೂರ್ಣ ಮಾಹಿತಿ ನೀಡಿದರು. ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರೇಯಾ ಸ್ವಾಗತಿಸಿ ಲೆರಿಕ್ ವಂದಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.