ಲೊರೆಟ್ಟೊ: ಲೊರೆಟ್ಟೊ ಮಾತ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಸರಳವಾಗಿ ಆಚರಿಸಲಾಯಿತು. ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಭಕ್ತಾದಿಗಳೊಂದಿಗೆ ಬಲಿ ಪೂಜೆಯನ್ನು ಅರ್ಪಿಸಿದರು.ಸಾಮಾಜಿಕ ಅಂತರದೊಂದಿಗೆ ನಡೆದ ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕೋವಿಡ್ 19 ಸೋಂಕಿನ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪರ ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದು ಪಡಿಸಲಾಗಿತ್ತು.ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ , ಸಾಮಾಜಿಕ ಅಂತರದಿಂದ ಪಾಲ್ಗೊಳ್ಳಲು ಬೇಕಾದ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು.ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು .ಚರ್ಚ್ ವ್ಯಾಪ್ತಿಗೆ ಬರುವ ಎಲ್ಲಾ ವಾಹನಗಳನ್ನು ಆಶೀರ್ವದಿಸಲಾ ಲಾಯಿತು.ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ಇವತ್ತಿನ ಸಂಭ್ರಮದ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದಿಸಿದರು.
