ಕೊಪ್ಪಳ ಜಿಲ್ಲೆಯ ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ನಾನು ವಿರೋಧಿಸುವುದಾಗಿ ಹೇಳಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಹಾಕುವ ಭರವಸೆ ಇದೆ. ಇಲ್ಲದಿದ್ದರೆ ಕೆಲಸ ಮಾಡುವುದು ಆಗದು. ಬಿಜೆಪಿಯವರು ನನ್ನ ಹಿಂಬಾಲಕರ ಮೇಲೆ ದಾಳಿ ನಡೆಸಿದ್ದಾರೆ. ಬ್ಯಾನರ್ ಹರಿದಿದ್ದಾರೆ. ನನಗೆ ಕಿರುಕುಳ ನೀಡಿದ್ದಾರೆ. ಹೀಗಿರುವಾಗ ಈ ಮೈತ್ರಿಗೆ ನಾನು ಬದ್ಧಳಲ್ಲ ಎಂದು ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಹೇಳಿದರು.