ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನವೀಕೃತ ಗೊಂಡ ನೂತನ ಗ್ರಂಥಾಲಯದ ಉದ್ಘಾಟನೆಯು ಇತ್ತೀಚೆಗೆ ಜರುಗಿತು. ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ|ಬೇಸಿಲ್ ವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾರ್ಥನಾ ವಿಧಿ ವಿಧಾನಗಳನ್ನು ನೆರವೇರಿಸಿ ದೀಪ ಬೆಳಗುವುದರ ಮೂಲಕ ಗ್ರಂಥಾಲಯವನ್ನು ಉದ್ಘಾಟಿಸಿದರು.
ಕನಸುಗಳು ನನಸಾಗ ಬೇಕಾದರೆ ಅವಿರತ ಶ್ರಮವಿರಬೇಕು. ಗ್ರಂಥಾಲಯಗಳು ವಿದ್ಯಾರ್ಥಿಗಳ ಜ್ಞಾನ ದಾಹವನ್ನು ಬೆಳಗಿಸಲು ಅಗತ್ಯ. ಈ ಗ್ರಂಥಾಲಯದಿಂದ ವಿದ್ಯಾರ್ಥಿಗಳು ಹೆಚ್ಚಿನ ಉಪಯೋಗ ಪಡೆದುಕೊಳ್ಳುವಂತಾಗಲೆಂದು ಅವರು ಶುಭ ಹಾರೈಸಿದರು.
ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ನಿಕಟ ಪೂರ್ವ ಉಪಾಧ್ಯಕ್ಷ ಲಿಯೋ ರೋಡ್ರಿಗಸ್, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಕ್ಸಿಂ ಆಲ್ಬುಕರ್ಕ್, ಕಾರ್ಯದರ್ಶಿ ಜುಲಿಯಾನ ಅಂದ್ರಾದೆ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಸ್ವಾಗತಿಸಿ ,ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ವಂದಿಸಿದರು. ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.