ಧರ್ಮಸ್ಥಳ, ಏಪ್ರಿಲ್ 10: ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ, ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ತೀರ್ಥಂಕರರಿಗೆ ವಿಶೇಷ ಅಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ, ಬಾಲ ತೀರ್ಥಂಕರನಿಗೆ ವೈಭವಯುತವಾದ ನಾಮಕರಣೋತ್ಸವವನ್ನು ಆಚರಿಸಲಾಯಿತು.
ಈ ಪವಿತ್ರ ಕಾರ್ಯಕ್ರಮದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು, ಡಿ. ಹರ್ಷೇಂದ್ರ ಕುಮಾರ್ ಅವರು ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಉಪಸ್ಥಿತರಿದ್ದು, ಭಕ್ತ ಸಮೂಹಕ್ಕೆ ಮಾರ್ಗದರ್ಶನ ನೀಡಿದರು.