PIC Credit: ANI
ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಯವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.
ಕೊರೋನಾ ಕಾರಣ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜಭವನದಲ್ಲಿ ರಾಜ್ಯಪಾಲ ಜಗದೀಪ್ ದನ್ಕರ್ ಪ್ರಮಾಣ ವಚನ ಬೋಧಿಸಿದರು. ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರಾದ ಪಾರ್ಥ ಚಟರ್ಜಿ, ಸುಬ್ರತೋ ಮುಖರ್ಜಿ ಹೀಗೆ ಕೆಲವೇ ಕೆಲವು ಜನ ಹಾಜರಿದ್ದರು.
ಮಮತಾ ಬ್ಯಾನರ್ಜಿಯವರು ಮುಖ್ಯಮಂತ್ರಿ ಆಗುತ್ತಿರುವುದು ಇದು ಮೂರನೇ ಬಾರಿ.