ಮಂಗಳೂರು,(ಮಾರ್ಚ್ 6):- ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶೈಲಜಾ. ಎ. ಕೋಟೆ ನಿರ್ದೇಶನದಂತೆ ಹಾಗೂ ಅಬಕಾರಿ ಅಧೀಕ್ಷಕ ವಿನೋದ್ ಕುಮಾರ್ ನೇತೃತ್ವದಲ್ಲಿ ಮಾರ್ಚ್ 6 ರಂದು ಮಧ್ಯಾಹ್ನ 1.30 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಅಬಕಾರಿ ತಂಡ ಹಾಗೂ ರೈಲ್ವೆ ಆರ್.ಪಿ.ಎಫ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಮಂಗಳೂರು ಸೆಂಟ್ರಲ್ ಸ್ಟೇಷನ್‍ನ ಪ್ಲಾಟ್‍ಫಾರ್ಮ್‍ನಲ್ಲಿ 22.500 ಲೀಟರ್ ಮಧ್ಯವನ್ನು ವಶಪಡಿಸಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನಗರದ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
