ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 8:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ನಂತರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ. ಮಧ್ಯಾಹ್ನ 3.00 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ ಮಳೆಯಿಂದ ಹಾನಿ ಉಂಟಾಗುತ್ತಿರುವ ಪ್ರದೇಶಗಳಲ್ಲಿ ಅಗತ್ಯ ರಕ್ಷಣಾ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.