ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕವಿನ್ಯಾಸ ನಕ್ಷೆಗಳಿಗೆ ಅನುಮೋದನೆ ನೀಡುವ ಕುರಿತಂತೆ ಸರಕಾರದ ಸಂಭಂದ ಪಟ್ಟ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭೆಯು ಮಾನ್ಯ ಸಭಾಧ್ಯಕ್ಷರಾದ ಯು ಟಿ ಖಾದರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲೆಯ ಭೂ ಪರಿವರ್ತನೆ ಕುರಿತಾಗಿ ಇರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಅತೀ ಶೀಘ್ರದಲ್ಲಿ ಬಗೆ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಒಂದು ವಾರದ ಒಳಗಾಗಿ ಸಮಸ್ಯೆಗಳು ಬಗೆ ಹರಿಸುವುದಾಗಿ ಅಧಿಕಾರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಸಚಿವರಾದ ಪ್ರಿಯಾಂಕ್ ಖರ್ಗೆ,ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್,ಪೌರಾಡಳಿತ ಸಚಿವರಾದ ರಹೀಂ ಖಾನ್,ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಸೇರಿದಂತೆ ವಿವಿಧ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.