ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಭುವನೇಂದ್ರ ಕಾಲೇಜು ಕಾರ್ಕಳ ಇದರ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ತಂಡವು ಸತತ 20ನೇ ಬಾರಿ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಶ್ರೀ ಭುವನೇಂದ್ರ ಕಾಲೇಜು ತಂಡವನ್ನು ಸೋಲಿಸಿ ಶ್ರೀ ಎಂ.ಕೆ ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಮಹಿಳೆಯರ ತಂಡವು ಎಸ್.ವಿ.ಟಿ ಮಹಿಳಾ ಕಾಲೇಜು ತಂಡವನ್ನು ಸೋಲಿಸಿ ಫೇಬಿಯನ್ ಬಿ ಎನ್ ಕುಲೊಸೊ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. 

ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್‍ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‍ನ ಪ್ರಜ್ವಲ್ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಶ್ರೀನಿವಾಸ್ ಪಡೆದುಕೊಂಡರು. 

ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್‍ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‍ನ ಸಹನಾ ಹಾಗೂ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ವೇದಾ ಪಡೆದುಕೊಂಡರು. 

ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.