ಮಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು, ರೂ. 1 ಲಕ್ಷವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ. 20,000ಗಳ ಸಹಾಯಧನ ಹಾಗೂ ರೂ.1.01 ಲಕ್ಷದಿಂದ ರೂ. 2 ಲಕ್ಷದ ವರೆಗೆ ಶೇ.15 ರಷ್ಟು ಕನಿಷ್ಠ ರೂ. 20,000/-ಗಳ ವರೆಗೆ ಗರಿಷ್ಠ ರೂ.30,000/- ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. 

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.