ಮಂಗಳೂರು, ಅ.24:  ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ,  2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.