ಮಂಗಳೂರು, ಜು.23: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿAಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2023-24ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು ಪ.ಪಂ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಕಾರ್ಮಿಕರ ಮಾಸಿಕ ವೇತನ ರೂ.35.000/-ಗಿಂತ ಮೀರಿರಬಾರದು. ಒಂದು ಕುಟುAಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ.

 ಶೈಕ್ಷಣಿಕ ಪ್ರೋತ್ಸಾಹ ಧನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್‌ ವಿಳಾಸ www.klwbapps.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ಸಂಪರ್ಕಿಸುವಂತೆ  ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.