ಮಂಗಳೂರು, ಏ.16: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಬುಧವಾರ ಆರಂಭವಾಗಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ನಡೆದ  ಭೌತಶಾಸ್ತ್ರ ಪರೀಕ್ಷೆಗೆ  20649  ಅಭ್ಯರ್ಥಿಗಳು ಹಾಜರಾಗಿದ್ದು, 1888 ಅಭ್ಯರ್ಥಿಗಳು  ಗೈರು ಹಾಜರಾಗಿದ್ದರು.

ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗೆ 20653 ಅಭ್ಯರ್ಥಿಗಳು ಹಾಜರಾಗಿದ್ದು, 1884 ಅಭ್ಯರ್ಥಿಗಳು  ಗೈರು ಹಾಜರಾಗಿದ್ದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.