ಮಂಗಳೂರು, ನ.27: ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಡಿಸೆಂಬರ್ 7 ರಂದು ಬೆಳಿಗ್ಗೆ 10.30ಕ್ಕೆ ಜಂಟಿ ಕೃಷಿ ನಿರ್ದೇಶಕರ ಕಛೇರಿ ಆವರಣ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರೂ ಮೈದಾನ ರಸ್ತೆ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.
ನಿಯಮಗಳು:
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಅದಕ್ಕೆ ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 5 ರೊಳಗೆ ಕಚೇರಿಯ dagrimng@gmail.com ಇಮೇಲ್ ಗೆ ಕಳುಹಿಸಬಹುದು ಅಥವಾ ಖುದ್ದಾಗಿ/ ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು. ಡಿಸೆಂಬರ್ 5ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ) ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾದ್ಯವನ್ನು ಮಾಡಿ ಸ್ಪರ್ಧೆಯಲ್ಲಿ ಪ್ರದರ್ಶಿಸಲು ಅವಕಾಶವಿರುತ್ತದೆ.
ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಮತ್ತು ಒಂದು ಮರತು ಹೋದ ಖಾದ್ಯ ಪಾಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರು ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಮತ್ತು ಮರತು ಹೋದ ಖಾದ್ಯ ಪಾಕ ಸ್ಪರ್ಧೆಯಲ್ಲಿ ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಾಗ್ರಿಗಳೊಂದಿಗೆ ತಯಾರಿಸಲು ಸಿದ್ದರಿರಬೇಕಾಗುತ್ತದೆ.
ಆಯಾ ವಿಭಾಗಗಳಲ್ಲಿ ಪ್ರಥಮ - ರೂ.5000, ದ್ವಿತೀಯ - ರೂ.3000, ತೃತೀಯ - ರೂ.2000 ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 0824-2423604/8884002801 ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,