ಮಂಗಳೂರು: ವಿಧಾನ ಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಕೆಪಿಸಿಸಿ ವತಿಯಿಂದ ಜ.8 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಎಸ್ಸಿ-ಎಸ್ಟಿ ಸಮಾವೇಶ, ಜ. 6ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ನಾ ನಾಯಕಿ’ ಸಮಾವೇಶ ಹಾಗೂ ಜ.22 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಸ್ ಯಾತ್ರೆಯಲ್ಲಿ ವಿಧಾನಸಭಾ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ಇತರ ಪ್ರಮುಖ ನಾಯಕರು ಭಾಗವಹಿಸಲಿದ್ದು, ಈ ನಿಟ್ಟಿನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಾಯಿತು. ಎಲ್ಲಾ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಸಭೆಯಲ್ಲಿ ನಿರ್ಧಾರಿಸಲಾಯಿತು.
ಸಭೆಯಲ್ಲಿ ಶಾಸಕರುಗಳಾದ ಯು.ಟಿ. ಖಾದರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರುಗಳಾದ ಮೊಯ್ದೀನ್ ಬಾವ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರ.ಕಾರ್ಯದರ್ಶಿಗಳಾದ ಮಿಥುನ್ ರೈ, ಮಮತಾ ಗಟ್ಟಿ, ಕೃಪಾ ಆಳ್ವ, ಧನಂಜಯ ಅಡ್ಪಂಗಯಾ, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೊ, ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ನಾರಾಯಣ್ ನಾಯ್ಕ್, ಶುಭಾಷ್ ಕೊಲ್ನಾಡ್, ಲಾರೆನ್ಸ್ ಡಿಸೋಜಾ, ಬಿ.ಎಂ.ಅಬ್ಬಾಸ್ ಅಲಿ, ಡಾ.ಶೇಖರ್ ಪೂಜಾರಿ, ಬ್ಲಾಕ್ ಅಧ್ಯಕ್ಷರುಗಳು, ಕೆಪಿಸಿಸಿ ಸದಸ್ಯರು ಹಾಗೂ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಡಿಸಿಸಿ ಉಪಾಧ್ಯಕ್ಷರಾದ ಸದಾಶಿವ್ ಉಳ್ಳಾಲ್ ಸ್ವಾಗತಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜಾ ವಂದಿಸಿದರು.