ಮಂಗಳೂರು, ಮೇ 22: ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ ಇಲಾಖೆಯ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನಮಾಡಲಾಗುತ್ತಿದೆ.

 ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸುವುದು, ತಳಿಗಳನ್ನು ಸಂರಕ್ಷಿಸುವುದು ಹಾಗೂ ಈ ತಳಿಗಳ ಅಭಿವೃದ್ಧಿ ಮಾಡುವುದು ಈ ಯೋಜನೆಯಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದಲ್ಲಿ ಭತ್ತ, ಅವರೆ, ಅಲಸಂದೆ ಮತ್ತು ಇತರೆ ಬೆಳೆಗಳನ್ನು ಆಯ್ಕೆಮಾಡಲಾಗಿದೆ. ಪ್ರಾಥಮಿಕವಾಗಿ ಸ್ಥಳೀಯ ತಳಿಗಳನ್ನು ಬೆಳೆಯುತ್ತಿರುವ ರೈತರನ್ನು ಗುರುತಿಸಬೇಕಾಗಿರುವುದರಿಂದ ಸಮೀಕ್ಷಾ ಕಾರ್ಯವನ್ನು ಇಲಾಖೆಯಿಂದ ಕೈಗೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮೇ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಹಾಗೂ ಸ್ಥಳೀಯ ದೇಸಿ ತಳಿಗಳನ್ನು ಬೆಳೆಯುತ್ತಿರುವ ರೈತರ ಬಗ್ಗೆ ಮಾಹಿತಿಯನ್ನು ಇಲಾಖೆಗೆ ನೀಡಬೇಕು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.