ಮಂಗಳೂರು,ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಾರತ ಸಂವಿಧಾನ ದಿನಾಚರಣೆಯು ನವೆಂಬರ್ 26ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಉರ್ವಸ್ಟೋರ್ ಡಾ|| ಬಿ.ಆರ್ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.