ಮಂಗಳೂರು, ಏ.23: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ, ಚುನಾವಣಾ ಕಾರ್ಯಕ್ಕೆ ಜಿಲ್ಲೆಯಲ್ಲಿ ಮೈಕ್ರೋಅಬ್‍ಸರ್ವರ್ ನಿಯೋಜನೆ ಕುರಿತಂತೆ ಚುನಾವಣಾ ಆಯೋಗದ ತಂತ್ರಾಂಶದ ಮೂಲಕ ಕರ್ತವ್ಯ ನಿಯೋಜನೆಯು ಸಾಮಾನ್ಯ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಸಮ್ಮುಖದಲ್ಲಿ ಏ. 23ರ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯದಲ್ಲಿ, ಮೈಕ್ರೋ ಅಬ್‍ಸರ್ವರ್ ಗಳ ವಿವರಗಳನ್ನು ಮತ್ತು ಕರ್ತವ್ಯಕ್ಕೆ ನಿಯೋಜಿಸಲಾದ ಸ್ಥಳಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಯಿತು.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ .ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸಿಪಿ ಸಿದ್ದಾರ್ಥ ಗೋಯಲ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.