ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ " ವೈಕುಂಠ ಏಕಾದಶಿ " ಪ್ರಯುಕ್ತ ಶ್ರೀ ದೇವಳದಲ್ಲಿ ವಿಶೇಷ ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಲಾಯಿತು . ವೈಕುಂಠ ಏಕಾದಶಿ ಪ್ರಯುಕ್ತ ಇಂದು ಶ್ರೀದೇವಳವು ದಿನಪೂರ್ತಿ ತೆರೆದಿದ್ದು ಭಜಕರು ದಿನವಿಡೀ ಶ್ರೀದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು .
ಸಹಸ್ರರಾರು ಭಜಕರು ಶ್ರೀದೇವರ ದರ್ಶನ ಪಡೆದು ಪುನೀತರಾದರು . ಶ್ರೀದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಕೆ . ಗಣೇಶ್ ಕಾಮತ್ , ಸತೀಶ್ ಪ್ರಭು ಉಪಸ್ಥಿತರಿದ್ದರು .
ಚಿತ್ರ : ಮಂಜು ನೀರೇಶ್ವಾಲ್ಯ