ಮಂಗಳೂರು: ಜಿಲ್ಲೆಯ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಬಾಲಕಿಯರ ಪದವಿ ಪೂರ್ವಕಾಲೇಜಿಗೆ ಶೈಕ್ಷಣಿಕ ವರ್ಷ 2024-25ನೇ ಸಾಲಿನಲ್ಲಿ  ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಶೇಕಡ 75% ಮೀಸಲಾತಿ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಹಾಗೂ ಶೇಕಡ 25% ಮೀಸಲಾತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಡಾ.ಎ.ಪಿ. ಜೆಅಬ್ದುಲ್ ಕಲಾಂ ಬಾಲಕಿಯರ ವಸತಿ ಪದವಿ ಪೂರ್ವಕಾಲೇಜು ಅಸೈಗೋಳಿ, ಮಂಗಳೂರು ಇಲ್ಲಿಗೆ ನೇರವಾಗಿ ಅರ್ಜಿ ಸಲ್ಲಿಸಬೇಕು.

ವಸತಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳು:

CLAT/CA Foundation Classes. ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ. ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ , ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತದೆ. ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪಾಂಡೇಶ್ವರ ದ.ಕ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಸಹಾಯವಾಣಿ ಸಂಖ್ಯೆ:7829892702, 9743013073, 08242211078 ಸಂಪರ್ಕಿಸು ವಂತೆ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.