ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಹಾಗೂ ಪ್ರವಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ: ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ ssp.postmatric.karnataka.gov.in ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005 ಇಮೇಲ್ :bcwd.karnataka.gov.in/ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ ವಿಳಾಸ :bcwdhelpline@gmail.com ಸಹಾಯವಾಣಿ: :postmatrichelp@karnataka.gov.in 1902 ಸಮಫರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.