ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮಟ್ಟದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 30 ರಿಂದ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷಾ ಶುಲ್ಕ ಮತ್ತು ಪರೀಕ್ಷಾ ನೋಂದಣಿಗೆ ಸಂಬಂಧಿಸಿದಂತೆ ಆಯಾಯ ಕಾಲೇಜುಗಳಿಂದ ಮಾಹಿತಿ ಪಡೆದುಕೊಳ್ಳಬಹುದು. ಹಿಂಬಾಕಿ ಇರುವವರಿಗೆ, ಕೊವಿಡ್ ಬಾಧಿತರಿಗೆ/ಪ್ರಯಾಣದ ತೊಂದರೆ ಉಂಟಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸಲಾಗುವುದು. ಸೆಪ್ಟೆಂಬರ್ 27 ರಿಂದ 1,3,5 ಮತ್ತು 7ನೇ ಸೆಮಿಸ್ಟರ್ಗೆ ನಡೆದಿರುವ ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭಿಸಲಾಗುವುದು. ಕೊವಿಡ್ ನಿಯಂತ್ರಣ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಪರೀಕ್ಷೆ ನಡೆಯುವುದರಿಂದ ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಬರೆಯಬಹುದು, ಎಂದು ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.
