ಮಂಗಳೂರು: ಕರ್ನಾಟಕ ರಾಜ್ಯದಿಂದ ಮೊದಲ ಬಾರಿಗೆ ಅಂತರಾಷ್ಟ್ರೀಯ ಯುವ ಶೃಂಗ ಸಭೆಯನ್ನು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನೆಪೋಯ ವಿಶ್ವವಿದ್ಯಾಲಯ ಮಂಗಳೂರು ಇವರ ಸಹಯೋಗದೊಂದಿಗೆ ಜೂನ್ 4 ಮತ್ತು ಜೂನ್ 6ರಂದು ಯೆನೆಪೋಯ ವಿಶ್ವವಿದ್ಯಾಲಯಯೆಂಡುರೆನ್ಸ್ ಜೋನ್‍ನಲ್ಲಿಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.