ಮಂಗಳೂರು, ಆ.14; ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹ ನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು.
ಅವರು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ ,ಉಡುಗೊರೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿ ಪ್ರಧಾನ ಸಂಚಾಲಕ ಪಿ.ಬಿ.ಹರೀಶ್ ರೈ,ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್, ಕಾಪಿಕಾಡ್ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿ ಸೋಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಿಂಧು, ಅಂಗನವಾಡಿ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.