ಮಂಗಳೂರು:  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆಯದೆ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳ ಒಳಗಾಗಿ ಪಾಲಿಕೆಯಿಂದ ಪರವಾನಿಗೆ ಪಡೆದುಕೊಳ್ಳಬೇಕು.

ಪರವಾನಿಗೆ ಪಡೆಯದೇ ಇದ್ದಲ್ಲಿ ಪಾಲಿಕೆಯಿಂದ ಖಾಸಗಿ ವಸತಿ ನಿಲಯಗಳನ್ನು ರದ್ದುಗೊಳಿಸಲು ಕಾನೂನು ಕ್ರಮ ವಹಿಸಲಾಗುತ್ತದೆ ಹಾಗೂ ಪಾಲಿಕೆಯು ವಿಧಿಸುವ ಭಾರಿ ಮೊತ್ತದ ದಂಡವನ್ನು ಭರಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.